Gauribidanur : ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ತೊಂಡೇಭಾವಿ ಹೋಬಳಿಯ ರೈಲ್ವೆ ನಿಲ್ದಾಣದ ಮಹೇಶ್ವರಮ್ಮ ದೇವಾಲಯದ ಆವರಣದಲ್ಲಿ ಸೋಮವಾರ ಇ- ಸ್ವತ್ತು ಅಭಿಯಾನ (E- Swathu Campaign) ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ “ಇ-ಸ್ವತ್ತು ಅಭಿಯಾನದಿಂದ ಸಾರ್ವಜನಿಕರು ಕಚೇರಿಗಳಿಗೆ ವಿನಾ ಕಾರಣ ಅಲೆದಾಡುವುದನ್ನು ಮತ್ತು ಮದ್ಯವರ್ತಿಗಳ ಹಾವಳಿಯನ್ನು ತಪ್ಪಿಸಿದಂತಾಗುತ್ತದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಸಕಾಲಕ್ಕೆ ಕೆಲಸ ಮಾಡಿಕೊಡದೆ ಅಲೆದಾಡಿಸಿದರೆ, ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ, ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡಲು ಜಾಗ ಗುರುತಿಸಲು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು. ಇ-ಸ್ವತ್ತನ್ನು ನೀಡಲು ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಅಥವಾ ವಿನಾ ಕಾರಣ ವಿಳಂಬ ಮಾಡಿದರೆ ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆ.ಕೆ. ಹೊನ್ನಯ್ಯ ಸೇರಿದಂತೆ ತಾಲ್ಲೂಕು ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮಸ್ಥರು ಉಪಸ್ಥಿತರಿದ್ದರು.