Gauribidanur : ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಗೌರಿಬಿದನೂರು ನಗರದ ಶಾಸಕರ ಗೃಹ ಕಚೇರಿಯಲ್ಲಿ ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಮಂಗಳವಾರ ಉಚಿತ ಬಸ್‌ಪಾಸ್ (Free Bus Pass Distribution) ವಿತರಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು “‘4 ವರ್ಷದಿಂದಲೂ ಸತತವಾಗಿ ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಗಬಾರದು ಎಂದು ಉಚಿತವಾಗಿ ಬಸ್ ಪಾಸ್ ವಿತರಿಸುತ್ತಿದ್ದೇವೆ. ಶಾಲಾ ಕಾಲೇಜುಗಳು ಈಗ ತಾನೇ ಪ್ರಾರಂಭವಾಗುತ್ತಿವೆ. ಹಂತಹಂತವಾಗಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಪಾಸ್ ಜತೆಗೆ ಉಚಿತವಾಗಿ ಪುಸ್ತಕ ನೀಡಲಾಗುವುದು. ಹೆಚ್ಚು ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು” ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಆರ್.ಅಶೋಕ್‌ಕುಮಾರ್, ಬಿ.ಜಿ.ವೇಣುಗೋಪಾಲ ರೆಡ್ಡಿ, ಶ್ರೀನಿವಾಸ ಗೌಡ, ಗಂಗಾಧರಪ್ಪ ಉಪಸ್ಥಿತರಿದ್ದರು.