Gauribidanur : ಗೌರಿಬಿದನೂರು ತಾಲ್ಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುವ ಅಡುಗೆ ಸಿಬ್ಬಂದಿಗೆ (Government School Cooking Staff) ಶನಿವಾರ ಅಗ್ನಿಶಾಮಕ ಸಿಬ್ಬಂದಿ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕಾರ್ಯಗಳ ಬಗ್ಗೆ ಅರಿವು ಮೂಡಿಸಿ ತರಬೇತಿ ಕಾರ್ಯಗಾರ (Fire Workshop) ನಡೆಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ “ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುವ ಸಿಬ್ಬಂದಿ ಜಾಗರೂಕತೆಯಿಂದ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಹಲವಾರು ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿ ಅಡಗಿರುತ್ತದೆ. ಮಕ್ಕಳಿಗೆ ಆಹಾರ ತಯಾರಿಸುವುದರ ಜೊತೆಗೆ ರುಚಿ, ಶುಚಿ, ಜೊತೆಗೆ ಪೌಷ್ಟಿಕತೆಗೆ ಹೆಚ್ಚು ಗಮನ ನೀಡಬೇಕು. ಸರ್ಕಾರ ಅಡುಗೆ ಸಿಬ್ಬಂದಿಗೆ ನೀಡುವ ವೇತನ ಕಡಿಮೆ ಇದ್ದು ಮುಂದಿನ ದಿನಗಳಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಶ್ರೀನಿವಾಸಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ಜೆ.ಕೆ ಹೊನ್ನಯ್ಯ, ಎನ್.ಆರ್.ಮಂಜುನಾಥ್, ಸಂಜೀವರಾಯಪ್ಪ ಬಾಲಪ್ಪ, ಸಿಆರ್‌ಪಿ ನರಸಿಂಹಮೂರ್ತಿ, ದಾಳಪ್ಪ, ಶಿವಪ್ರಸಾದ್, ರಾಜಮ್ಮ, ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.