Gauribidanur : ಗೌರಿಬಿದನೂರು ನಗರದ ಹೊರವಲಯದ ಆದರ್ಶ ಶಾಲೆಯಲ್ಲಿ ಗೌರಿಬಿದನೂರು ಮತ್ತು ಗುಡಿಬಂಡೆ ತಾಲ್ಲೂಕಿನ ಪ್ರೌಢಶಾಲಾ ಸಹಶಿಕ್ಷಕರಿಗೆ (High School Teachers) ಎರಡು ದಿನಗಳ ತರಬೇತಿ ಕಾರ್ಯಾಗಾರ (Workshop) ಏರ್ಪಡಿಸಲಾಗಿತ್ತು ಮತ್ತು ಗೌರಿಬಿದನೂರು ತಾಲ್ಲೂಕಿನ ಸಂಪನ್ಮೂಲ ತಂಡ ರಚಿಸಿದ್ದ ‘ಸುಗಮ’ ಎಂಬ ವಿಷಯ ಸಂಪನ್ಮೂಲ ಕೈಪಿಡಿಯನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ “ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಮತ್ತು ಗುಣಾತ್ಮಕ ಫಲಿತಾಂಶ ಪಡೆಯಲು ಎಲ್ಲ ಶಾಲೆ ಶಿಕ್ಷಕರು ಈಗಿನಿಂದಲೇ ಶ್ರಮಿಸಬೇಕಾಗಿದೆ. ಬದಲಾಗುತ್ತಿರುವ ಪರೀಕ್ಷಾ ಪದ್ಧತಿಗೆ ಅನುಗುಣವಾಗಿ ಪರೀಕ್ಷೆ ಎದುರಿಸುವ ಆತ್ಮಸ್ಥೈರ್ಯವನ್ನು ಮಕ್ಕಳಲ್ಲಿ ಮೂಡಿಸಬೇಕಾಗಿದ್ದು ಎಲ್ಲ ಶಿಕ್ಷಕರು ಹೊರಪರೀಕ್ಷೆ ಪದ್ಧತಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ” ಎಂದು ತಿಳಿಸಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ, ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur