Gauribidanur : ಗೌರಿಬಿದನೂರು ತಾಲ್ಲೂಕಿನ ಹೊಸಕೋಟೆ ಬಳಿಯ ಡಾ.ಎಚ್ ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರದ ಬಳಿ ಕನ್ನಡ ಜ್ಯೋತಿ ರಥಯಾತ್ರೆಯನ್ನು (Kannada Jyothi Rathayatre) ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಗುರುವಾರ ಸ್ವಾಗತಿಸಿ ಜಿಲ್ಲೆಯಾದ್ಯಂತ ಸಂಚರಿಸಲು ರಥಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ರಾಜ್ಯ ಉದಯವಾಗಿ 50 ವರ್ಷ ತುಂಬಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಸಮಸ್ತ ನಾಗರಿಕರು ಈ ಸಂಭ್ರಮದಲ್ಲಿ ಪಾಲ್ಗೊಳ್ಳಿ. ಇಂದಿನಿಂದ ಜುಲೈ 30ರವರೆಗೆ ಜಿಲ್ಲೆಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಮಾಡಲಿದ್ದು ಒಂದೊಂದು ತಾಲ್ಲೂಕಿನಲ್ಲೂ ಒಂದೊಂದು ದಿನ ಸಂಚಾರ ನಡೆಸಿ ಮುಂದಿನ ಜಿಲ್ಲೆಗೆ ಸಾಗಲಿದೆ” ಎಂದು ತಿಳಿಸಿದರು.
ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ, ತಹಶೀಲ್ದಾರ್ ಮಹೇಶ್ ಪತ್ರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೊನ್ನಯ್ಯ, ಪೌರಾಯುಕ್ತೆ ಗೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಸಾಹಿತಿಗಳು, ಕನ್ನಡ ಪ್ರೇಮಿಗಳು, ಕನ್ನಡ ಪರಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಲಾತಂಡಗಳು, ಶಾಲಾ ಕಾಲೇಜುಗಳ ಮಕ್ಕಳು, ಸಾರ್ವಜನಿಕರು ಪಾಲ್ಗೊಂಡಿದ್ದರು.