Gauribidanur : ಶಾಸಕ ಎನ್.ಎಚ್.ಶಿವಶಂಕರರೆಡ್ಡಿ (N. H. Shivashankara Reddy) ನೇತೃತ್ವದಲ್ಲಿ ಗೌರಿಬಿದನೂರು ನಗರದ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ (KDP Meeting) ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕರು “ಪ್ರಸ್ತುತ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣದಿರುವುದು ಸಂತಸದ ವಿಚಾರವಾಗಿದ್ದು ಎಂಜಿನಿಯರಿಂಗ್ ವಿಭಾಗದಿಂದ ವಿವಿಧ ಗ್ರಾಮಗಳಲ್ಲಿ ಉಳಿದಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಬೇಕಾಗಿದೆ. ರೇಷ್ಮೆ ಇಲಾಖೆ ವತಿಯಿಂದ ರೈತರಿಗೆ ಮತ್ತಷ್ಟು ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ ಮಾಡಿ ರೇಷ್ಮೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ವತಿಯಿಂದ ಬೆಳೆ ವಿಮೆ, ಬೆಳೆ ಪರಿಹಾರ ಸೇರಿದಂತೆ ಸರ್ಕಾರದಿಂದ ಸಿಗುವ ಇನ್ನಿತರ ಆರ್ಥಿಕ ಸೌಲಭ್ಯ ರೈತರಿಗೆ ತಲುಪಲು ಅಧಿಕಾರಿಗಳು ಪ್ರಯತ್ನಿಸಬೇಕಾಗಿದೆ. ಬೇಸಿಗೆಯಲ್ಲಿ ವಿನಾಕಾರಣ ಲೋಡ್ ಶೆಡ್ಡಿಂಗ್ ನೆಪದಲ್ಲಿ ರೈತರಿಗೆ ನೀಡುವ ವಿದ್ಯುತ್ ನಲ್ಲಿ ಕಡಿತವಾಗದಂತೆ ಬೆಸ್ಕಾಂ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕಾಗಿದೆ. ವಸತಿ ನಿಲಯಗಳಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಾ ಅಧಿಕಾರಿಗಳು ಕ್ರಮವಹಿಸಬೇಕಾಗಿದೆ. ಮಾನ್ಸೂನ್‌ನಲ್ಲಿ ನೆಟ್ಟಿರುವ ಗಿಡಗಳ ಪೋಷಣೆಗೆ ಸಾಮಾಜಿಕ ಹಾಗೂ ವಲಯ ಅರಣ್ಯ ಅಧಿಕಾರಿಗಳು ಕ್ರಮವಹಿಸಬೇಕಾಗಿದೆ” ಎಂದು ಹೇಳಿದರು.
ಸಭೆಯಲ್ಲಿ ತಾ.ಪಂ ಇಒ ಆರ್.ಹರೀಶ್, ತಹಶೀಲ್ದಾರ್ ಎಚ್.ಶ್ರೀನಿವಾಸ್, ತಾ.ಪಂ ಇಒ ಆರ್.ಹರೀಶ್, ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಸಿ.ಎನ್.ಪ್ರಕಾಶ್, ಕೆಡಿಪಿ ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur