Gauribidanur : ವಿಧಾನಸಭೆ ಚುನಾವಣೆಯಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಕೆಂಪರಾಜು (K Kemparaju) ಮಾಜಿ ಸಚಿವ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು (BJP Joining).
ಕುರುಬ ಸಮಾಜದ ಪ್ರಭಾವಿ ನಾಯಕಾರಾಗಿರುವ ಕೆ.ಕೆಂಪರಾಜು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ 24,202 ಮತಗಳೊಂದಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗಿಂತಲೂ ಅಧಿಕ ಮತಗಳನ್ನು ಪಡೆದಿದ್ದರು.