Gauribidanur : ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕರ (construction workers) 26 ಮಂದಿ ಮಕ್ಕಳಿಗೆ (Children) ಗೌರಿಬಿದನೂರು ನಗರದ ತಾಲ್ಲೂಕು ಕಚೇರಿಯಲ್ಲಿ ಲ್ಯಾಪ್‌ಟಾಪ್ ವಿತರಿಸಲಾಯಿತು. (Laptop Distribution)
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ “ಕಾರ್ಮಿಕ ಇಲಾಖೆಯ ಹಲವಾರು ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಮಾಹಿತಿ ಕೊರೆತಿಯಿದ್ದು ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಅಧಿಕಾರಿಗಳು ಸೂಕ್ತ ತಿಳುವಳಿಕೆ ಮೂಡಿಸುವ ಕೆಲಸ ಮಾಡಬೇಕು. ಆಗ ಕಾರ್ಮಿಕರಿಗೆ ಅನುಕೂಲವಾಗುತ್ತದೆ” ಎಂದರು.
ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ಆರ್ ಹರೀಶ್, ನರಸಿಂಹಮೂರ್ತಿ, ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.