Gauribidanur : ಗೌರಿಬಿದನೂರು ನಗರದ SSEA PU College ನಲ್ಲಿ ಗುರುವಾರ ಶಾಲಾ ಸುರಕ್ಷತಾ ಸಮಿತಿ ಉದ್ಘಾಟನೆ ಹಾಗೂ ಕಾನೂನು ಅರಿವು (Law Awareness Program) ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸ್ ಅಧೀಕ್ಷಕ ಕುಶಾಲ್ ಚೌಕ್ಸೆ, “ಈಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಮೊಬೈಲ್ ಆ್ಯಪ್‌ಗಳು ಮಕ್ಕಳ ಖಾಸಗಿ ಮಾಹಿತಿ ಕದ್ದು, ಬ್ಲಾಕ್‌ಮೇಲ್ ಮಾಡಿ, ಸುಲಿಗೆ ಮಾಡುವುದು ಹೆಚ್ಚುತ್ತಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರು ವಿದ್ಯಾರ್ಥಿಗಳ ಮೊಬೈಲ್‌ಗಳನ್ನು ಆಗಾಗ ಗಮನಿಸುತ್ತಿರಬೇಕು. ಶಾಲೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಶಾಲಾ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡುವುದು ಅಪರಾಧ. ಇಂತಹ ವಿದ್ಯಾರ್ಥಿಗಳು ಮತ್ತು ಪೋಷಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕ ರಾಜ ಇಮಾಮ್ ಖಾಸಿಂ, ವೃತ್ತ ನಿರೀಕ್ಷಕ ಕೆ.ಪಿ. ಸತ್ಯ ನಾರಾಯಣ್, ಬಿಇಒ ಶ್ರೀನಿವಾಸ ಮೂರ್ತಿ, ಪ್ರಾoಶುಪಾಲ ಶ್ರೀನಿವಾಸ್, ಸಿಡಿಪಿಒ ಮೂಕಾಂಬಿಕಾ, ಪಿಎಸ್ಐ ಗೋಪಾಲ್, ಶಾಲಾ ಶಿಕ್ಷಕರು, ಪೋಷಕರು, ಎಸ್‌ಡಿಎಂಸಿ, ಶಾಲಾ ಮಕ್ಕಳ ಪ್ರತಿನಿಧಿಗಳು ಹಾಗೂ ಶಾಲಾ ಸುರಕ್ಷಿತ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.