Gauribidanur : ಗೌರಿಬಿದನೂರು ತಾಲ್ಲೂಕಿನ ಗೆದರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯೂತ್ ಪಾರ್ ಸೇವಾ (Youth For Seva) ಮತ್ತು ಇನ್ನೋಟೆಕ್ ಕಂಪನಿಯ ಸಹಕಾರದೊಂದಿಗೆ ಕಲಿಕಾ ಪರಿಕರಗಳ (Learning Equipments) ವಿತರಣಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ “ಪೋಷಕರು ಮತ್ತು ಶಾಲೆಯ ಶಿಕ್ಷಕರ ಹೆಚ್ಚಿನ ಶ್ರಮದಿಂದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾಕಷ್ಟು ಮಂದಿ ಈ ಬಾರಿಯ ಎಸ್ಸೆಸ್ಸೆಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಮಂದಿ ದಾನಿಗಳು ಮತ್ತು ಸಂಘ ಸಂಸ್ಥೆಗಳು ನೆರವಾಗುತ್ತಿದ್ದು ಅವರ ಸಹಕಾರಕ್ಕೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪ್ರತಿಫಲವಾಗಿ ನೀಡಬೇಕಾಗಿದೆ” ಎಂದು ತಿಳಿಸಿದರು.
ಮುಖ್ಯ ಶಿಕ್ಷಕರಾದ ವಾಸನ್, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಲಕ್ಷ್ಮಿಕಾಂತ್, ಎಸ್‌ಡಿಎಂಸಿ ಅಧ್ಯಕ್ಷ ಅಶ್ವತ್ಥನಾರಾಯಣಪ್ಪ, ಶಿಕ್ಷಕರಾದ ಪ್ರವೀಣ್, ಅಂಜಿನಪ್ಪ, ಲಕ್ಷ್ಮಿನಾರಾಯಣಪ್ಪ, ನಾಗರಾಜ್, ರಂಗಯ್ಯ, ಮಂಜುಳಾ, ನಿರ್ಮಿತಿ ಕೇಂದ್ರದ ಇಂಜಿನಿಯರ್ ಮುನಿಸ್ವಾಮಿಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.