Gauribidanur : ಮಂಚೇನಹಳ್ಳಿ ತಾಲ್ಲೂಕಿನ ಹೊನ್ನಪ್ಪನಹಳ್ಳಿ ಗ್ರಾಮದಲ್ಲಿ ಶೆಡ್‌ನಿಂದ 29 ಕುರಿಗಳು ಮತ್ತು 2 ಮೇಕೆಗಳನ್ನು ಕಳ್ಳತನ ಮಾಡಿದ್ದ ಐವರು ಆರೋಪಿಗಳ ಜಾಲವನ್ನು ಮಂಚೇನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿ ಬಂಧಿಸಿದ್ದಾರೆ.
ಡಿಸೆಂಬರ್ 2ರ ರಾತ್ರಿ ಹೊನ್ನಪ್ಪನಹಳ್ಳಿ ಗ್ರಾಮದ ನಂದೀಶ ಎಂಬುವರ ಶೆಡ್‌ನಲ್ಲಿದ್ದ ಕುರಿ ಮತ್ತು ಮೇಕೆಗಳನ್ನು ಕಳ್ಳರು ಕದ್ದೊಯ್ದಿದ್ದರು. ಈ ಸಂಬಂಧ ನಂದೀಶ ಅವರು ಪ್ರಕರಣ ದಾಖಲಿಸಿದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು ಬೆಂಗಳೂರಿನ ಕೋಣನಕುಂಟೆ ಪ್ರದೇಶಕ್ಕೆ ಸೇರಿದವರಾಗಿದ್ದು, ಅವರಲ್ಲಿ ನಾಲ್ವರು ವಯಸ್ಕರು ಮತ್ತು ಒಬ್ಬ ಬಾಲಕ ಸೇರಿದ್ದಾನೆ.
- ಯಶವಂತ್ (21)
- ಸುನೀಲ್ (21)
- ರಾಹುಲ್ (20)
- ಮಂಜುನಾಥ್ (25)
ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕ
ಪೊಲೀಸರು ಬಂಧಿತರಿಂದ ಕಳ್ಳತನಕ್ಕೆ ಬಳಸಿದ್ದ ಸರಕು ಸಾಗಣೆ ವಾಹನ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಂಚೇನಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.
