ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

- Advertisement -
- Advertisement -

Gauribidanur : ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ‌ಹೋಬಳಿಯ ಭೂಮೇನಹಳ್ಳಿ ಬಳಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಭೂಮಿ ಪೂಜೆ (Bhoomi Puja for road works) ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ “ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ, ಪ್ರವಾಸೋದ್ಯಮ, ಧಾರ್ಮಿಕ ಸೇರಿದಂತೆ ಇತರ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದರೆ ಅಗತ್ಯ ಮೂಲ ಸೌಲಭ್ಯಗಳನ್ನು ‌ಅಭಿವೃದ್ದಿ ಪಡಿಸುವುದು ಅನಿವಾರ್ಯವಾಗಿದ್ದು ಈ ನಿಟ್ಟಿನಲ್ಲಿ ಗ್ರಾಮಕ್ಕೆ ಸುಮಾರು 3 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗುವುದು. ಕಾಮಗಾರಿಗೆ ಸ್ಥಳೀಯರು ಯಾವುದೇ ತೊಂದರೆ ನೀಡದೆ ಅಗತ್ಯ ಸಹಕಾರ ನೀಡುವ ಮೂಲಕ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು, ರಂಕ ರಾಜ್ ಡೆವಲಪರ್ಸ್ ಮುಖ್ಯಸ್ಥ ರಾಜೇಶ್ ಮಾತನಾಡಿದರು. ತಹಶೀಲ್ದಾರ್ ಮಹೇಶ್ ಪತ್ರಿ, ಸರ್ಕಲ್ ಇನ್‌ಸ್ಪೆಕ್ಟರ್ ಸತ್ಯನಾರಾಯಣ್, ಗ್ರಾ.ಪಂ ಪಿಡಿಒ ಬಸವರಾಜ್ ಬಳೂಟಗಿ, ಪಿಎಸ್‌ಐ ಟಿ.ಮೂರ್ತಿ, ಮುಖಂಡರಾದ ಪ್ರದೀಪ್ ಗೌಡ, ಸೋಮಶೇಖರ್ ರೆಡ್ಡಿ, ಕೃಷ್ಣಪ್ಪ, ಅಶೋಕ್, ಗಂಗಾಧರಚಾರಿ, ನರಸರೆಡ್ಡಿ, ರಾವ್, ಪಿ.ಎನ್.ಶಿವಶಂಕರರೆಡ್ಡಿ, ವಿಜಿಕುಮಾರ್, ನರೇಶ್ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!