Gauribidanur: ಭಾನುವಾರ ಸಂಜೆ ಗೌರಿಬಿದನೂರು ತಾಲ್ಲೂಕಿನ ಕಲ್ಲೂಡಿ ಗ್ರಾಮದ ಬಳಿ, ಗುಂಡಾಪುರ ಹೊರವಲಯ ಮತ್ತು ಕುರುಬರಹಳ್ಳಿ ಗೇಟ್ ಬಳಿ ಸರಣಿ ಅಪಘಾತಗಳು ಸಂಭವಿಸಿವೆ.
ಗೌರಿಬಿದನೂರು ನಗರ ಹೊರವಲಯದ ಕಲ್ಲೂಡಿ ಗ್ರಾಮದ ಬಳಿ ಬೆಂಗಳೂರು- ಹಿಂದೂಪುರ ರಸ್ತೆಯ ವಿಭಜಕಕ್ಕೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುರುಬರಹಳ್ಳಿ ಗೇಟ್ ಬಳಿ ಎರಡು ದ್ವಿಚಕ್ರವಾಹನಗಳ ಸವಾರರು ಮುಖಾಮುಖಿ ಡಿಕ್ಕಿ ಹೊಡೆದಿರುವ ಪರಿಣಾಮ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗುಂಡಾಪುರ ಹೊರವಲಯದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಇದರಿಂದಾಗಿ ವಾಹನ ಸವಾರರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಈ ಸರಣಿ ಅಪಘಾತಗಳಲ್ಲಿ ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ ಹಾಗೂ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.