Home News ಧೂಮಪಾನ ವಿರುದ್ಧ ಗುಲಾಬಿ ಆಂದೋಲನ

ಧೂಮಪಾನ ವಿರುದ್ಧ ಗುಲಾಬಿ ಆಂದೋಲನ

0
Gauribidanur Rose Movement March against Tobbacco

Gauribidanur : ಗೌರಿಬಿದನೂರು ತಾಲ್ಲೂಕು ಆಡಳಿತ, ನಗರಸಭೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಆಶ್ರಯದಲ್ಲಿ ಗುಲಾಬಿ ಆಂದೋಲನ (Rose Movement March against tobacco) ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಮೋಹನ್ ರೆಡ್ಡಿ “ಶಾಲೆಗಳ ಸುತ್ತಮುತ್ತ ತಂಬಾಕು ಮಾರಾಟ ಮಾಡುವುದನ್ನು ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಮತ್ತು ಮಾರಾಟ ಮಾಡುವವರಿಗೆ ಶಾಲಾ ಮಕ್ಕಳಿಂದ ಗುಲಾಬಿ ಹೂಗಳನ್ನು ನೀಡಿ ಅರಿವು ಮೂಡಿಸಲಾಗುತ್ತಿದೆ”ಎಂದು ತಿಳಿಸಿದರು.

ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ನಗರಸಭೆ ಪೌರಾಯುಕ್ತೆ ಡಿ.ಎಂ ಗೀತಾ, ನಗರಸಭೆ ಅಧ್ಯಕ್ಷ ಲಕ್ಷ್ಮಿನಾರಾಯಣಪ್ಪ, ಶಿವಶಂಕರ್, ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version