Home Gauribidanur ಗೌರಿಬಿದನೂರು: ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಆರಂಭ

ಗೌರಿಬಿದನೂರು: ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಆರಂಭ

0
Gauribidanur Uttara Pinakini Bridge

Gauribidanur : ಗೌರಿಬಿದನೂರು ನಗರದಿಂದ ಚಿಕ್ಕಬಳ್ಳಾಪುರ ಮಾರ್ಗದಲ್ಲಿರುವ ಉತ್ತರ ಪಿನಾಕಿನಿ ನದಿ ಸೇತುವೆಯ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ, ಶುಕ್ರವಾರದಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಸೇತುವೆಯನ್ನು 8 ಕೋಟಿ ರೂಪಾಯಿ ವೆಚ್ಚದಲ್ಲಿ 16 ಮೀಟರ್ ಅಗಲದ ಹೊಸ ಸೇತುವೆಯಾಗಿ ನವೀಕರಿಸುವ ಯೋಜನೆ ರೂಪಿಸಲಾಗಿದೆ. ಹಾಲಿ 8 ಮೀಟರ್ ಅಗಲದ ಹಳೆಯ ಸೇತುವೆಯನ್ನು ತೆರವುಗೊಳಿಸುವ ಕಾರ್ಯ ಮಳೆಗಾಲದ ಬಳಿಕ ಪುನಾರಂಭವಾಗಿದೆ.

ಈ ಹಿನ್ನಲೆಯಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಂತಹ ಲಘು ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಅವಕಾಶ ನೀಡಲಾಗಿದೆ. ಭಾರಿ ವಾಹನಗಳಿಗೆ ಬೈಪಾಸ್ ರಸ್ತೆಯ ಮೂಲಕ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬದಲಿ ಮಾರ್ಗಗಳಲ್ಲಿ ಸಂಚರಿಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version