Gauribidanur : ಹುಟ್ಟುಹಬ್ಬದ ಆಚರಣೆಯಲ್ಲಿ ಲಾಂಗ್ ಬಳಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ಗ್ರಾಮದ ಯುವಕನೊಬ್ಬನನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.
ಬಂಧಿತನು ಅನಿಲ್ ಕುಮಾರ್ (24) ಎಂಬ ಆಟೊ ಚಾಲಕ. ತನ್ನ 24ನೇ ಹುಟ್ಟುಹಬ್ಬದ ಪ್ರಯುಕ್ತ ಲಾಂಗ್ ಹಿಡಿದು ಕೇಕ್ ಕತ್ತರಿಸಿದ ವಿಡಿಯೊ ಮತ್ತು ಫೋಟೋಗಳನ್ನು ಸ್ನೇಹಿತರು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಈ ದೃಶ್ಯಗಳು ವೈರಲ್ ಆಗುತ್ತಿದ್ದಂತೆ ಸ್ಥಳೀಯ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅನಿಲ್ ಕುಮಾರ್‌ನನ್ನು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಹಿಂಸಾತ್ಮಕ ಭಾವ ವ್ಯಕ್ತಪಡಿಸುವ ಘಟನೆಯು ಯುವಕರಲ್ಲಿ ತಪ್ಪು ಸಂದೇಶ ಹರಡುವ ಅಪಾಯವಿರುವ ಹಿನ್ನೆಲೆಯಲ್ಲಿ, ಪೊಲೀಸರು ಅಂತಹ ಕೆಲಸಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿದ್ದಾರೆ.