Chintamani: 2024ನೇ ಸಾಲಿನ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳೆ ಪ್ರಶಸ್ತಿಗಳಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು (GKVK Farmer Award) ಅರ್ಜಿಗಳನ್ನು (Call For Applications)ಆಹ್ವಾನಿಸಿದೆ.
ರಾಜ್ಯಮಟ್ಟದಲ್ಲಿ ಎಚ್.ಡಿ. ದೇವೇ ಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಎಂ.ಎಚ್. ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಆರ್. ದ್ವಾರಕೀನಾಥ್ ಅತ್ಯುತ್ಯಮ ರೈತ ಹಾಗೂ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ, ಜಿಲ್ಲಾಮಟ್ಟದಲ್ಲಿ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ, ತಾಲ್ಲೂಕು ಮಟ್ಟದಲ್ಲಿ ಯುವ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ನೀಡಲಾಗುವುದು.
ಆಸಕ್ತಿಯುಳ್ಳವರು ಅರ್ಜಿಯನ್ನು ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಗಳ ಜಿಲ್ಲಾ, ತಾಲ್ಲೂಕು ಕಚೇರಿ ಹಾಗೂ ಕೃಷಿ ವಿಜ್ಞಾನ ಕೇಂದ್ರ, ಕುರಬೂರು ಫಾರಂ ಚಿಂತಾಮಣಿಯಿಂದ ಪಡೆಯಬಹುದು. ಅಥವಾ ಕೃಷಿ ವಿಶ್ವವಿದ್ಯಾನಿಲಯದ ವೆಬ್ ಸೈಟ್ www.uasbangalore.edu.in, www.uasbangalore.edu.in ನಿಂದಲೂ ಪಡೆಯಬಹುದು.