- Advertisement -
- Advertisement -
- Advertisement -
- Advertisement -
Chikkaballapur : ಕೃಷಿ ಪ್ರಶಸ್ತಿಯಡಿ ಮುಂಗಾರು ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಕಸಬಾ, ನಂದಿ ಮತ್ತು ಮಂಡಿಕಲ್ಲು ಹೋಬಳಿಗಳಲ್ಲಿ ಹೆಚ್ಚಿನ ವಿಸ್ತೀರ್ಣದಲ್ಲಿ ಬೆಳೆಯುವ ಮಳೆಯಾಶ್ರಿತ ರಾಗಿ ಬೆಳೆಯನ್ನು ಕೃಷಿ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಅದರಂತೆ ರಾಗಿ ಬೆಳೆಯುವ ರೈತರು ಅಥವಾ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಚಿಕ್ಕಬಳ್ಳಾಪುರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.
For Daily Updates WhatsApp ‘HI’ to 7406303366
- Advertisement -