Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ, ಕ್ರೀಡಾ ಇಲಾಖೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ (Government Employees Sports) ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ” ಪ್ರತಿಯೊಬ್ಬ ಮನುಷ್ಯನಲ್ಲಿಯೂ ಸ್ಪರ್ಧಾತ್ಮಕ ಮನೋಭಾವದ ಜೊತೆಗೆ ಪ್ರತಿಭೆಯೂ ಅಡಗಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡುವುದು ಮುಖ್ಯ. ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾನಸಿಕ ಸಮಸ್ಯೆಗಳನ್ನು ದೂರ ಮಾಡಲಿದೆ. ಪ್ರತಿಯೊಬ್ಬರೂ ಕ್ರೀಡಾ ಆಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು” ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಜಿ.ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ.ಜಿ, ಸರ್ಕಾರಿ ನೌಕರರ ಸಂಘದ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಕೆ.ಎನ್.ಸುಬ್ಬಾರೆಡ್ಡಿ, ಕೆ.ವಿ ನಾರಾಯಣಸ್ವಾಮಿ, ಡಿ.ಎನ್.ಮಧುಸೂದನ್ ರೆಡ್ಡಿ, ಮುನಿರೆಡ್ಡಿ, ಸತ್ಯನಾರಾಯಣ ರೆಡ್ಡಿ, ಕೆ.ಆರ್.ಶಿವಶಂಕರ್, ಸಿ. ಶಿವಕುಮಾರ್, ಎ.ಗಂಗಾಧರ್, ಕೆ.ಎಸ್.ಅಶೋಕ್ ಕುಮಾರ್, ಬಸವರಾಜ್ ಎಚ್. ಚಿಕ್ಕಣ್ಣ, ಕೆ.ಜಿ.ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಬಾಲರಾಜು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.