ಹಳೆಯ OPS ಪಿಂಚಣಿ ಯೋಜನೆ ಮರು ಜಾರಿ ಮಾಡಲು ಒತ್ತಾಯ

- Advertisement -
- Advertisement -

Sidlaghatta : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇದೀಗ ಇರುವ ನೂತನ ಪಿಂಚಣಿ ಯೋಜನೆ (NPS ಪಿಂಚಣಿ) ಹಾಗೂ ಯೂನಿಫೈಡ್ ಪೆನ್ಷನ್ ಸ್ಕೀಮ್ (UPS ಪಿಂಚಣಿ ಯೋಜನೆ) ಯನ್ನು ರದ್ದುಪಡಿಸಿ ಈ ಹಿಂದೆ ಇದ್ದ ನಿಶ್ಚಿತ ಪಿಂಚಣಿ ಯೋಜನೆ (OPS ಯೋಜನೆ) ಯನ್ನು ಮರು ಜಾರಿ ಮಾಡಬೇಕೆಂದು ಎನ್‌.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ, ಶಿಕ್ಷಕ ವಿ.ಎನ್.ಗಜೇಂದ್ರ ಆಗ್ರಹಿಸಿದರು.

ನಗರದ ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ತಾಲ್ಲೂಕು ಎನ್.ಪಿ.ಎಸ್ ನೌಕರರ ಸಂಘದ ಮೂಲಕ ತಹಶೀಲ್ದಾರರ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ದೇಶಾದ್ಯಂತ ಎನ್.ಪಿ.ಎಸ್ ವಿರೋಧಿಸಿ ಕಳೆದ ಹಲವು ವರ್ಷಗಳಿಂದ ನೌಕರರು ನಡೆಸಿದ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಒ.ಪಿ.ಎಸ್ ಜಾರಿಗೊಳಿಸುವ ಬದಲು ಯು.ಪಿ.ಎಸ್ ಅಂದರೆ ಯೂನಿಫೈಡ್ ಪೆನ್ಷನ್ ಸ್ಕೀಮ್ (ಏಕೀಕೃತ ಪಿಂಚಣಿ ಯೋಜನೆ) ಜಾರಿಗೊಳಿಸಲು ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.

ಸದರಿ ಯೋಜನೆಯು ಷೇರು ಮಾರುಕಟ್ಟೆ ಆಧಾರಿತವಾಗಿದ್ದು ಸರ್ಕಾರಿ ನೌಕರರ ಸಂಧ್ಯಾ ಕಾಲದ ಬದುಕಿಗೆ ಯಾವುದೇ ಭದ್ರತೆ ಒದಗಿಸುವ ಅಂಶಗಳನ್ನು ಹೊಂದಿಲ್ಲ. ಹಾಗಾಗಿ ಇಂದು ರಾಜ್ಯಾದ್ಯಂತ “No NPS, No UPS, Only OPS” ಘೋಷಣೆ ಮೊಳಗಿಸುತ್ತಾ, ಓ.ಪಿ.ಎಸ್ ಜಾರಿಗೊಳಿಸಿವಂತೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷ ಈ ಹಿಂದೆ ನಮ್ಮ ಸಂಘಟನೆಗೆ ನೀಡಿರುವ ಭರವಸೆಯಂತೆ ಎನ್‌.ಪಿ.ಎಸ್ ಅನ್ನು ರದ್ದುಗೊಳಿಸಿ ಓ.ಪಿ.ಎಸ್ ಅನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ವಿ.ಎನ್. ಗಜೇಂದ್ರ, ಪ್ರಧಾನ ಕಾರ್ಯದರ್ಶಿ ನರಸಿಂಹರಾಜು, ಖಜಾಂಚಿ ಟಿ.ಟಿ.ನರಸಿಂಹಪ್ಪ, ಸಹಕಾರ್ಯದರ್ಶಿ ಶಿವಶಂಕರ್, ಜಂಟಿ ಕಾರ್ಯದರ್ಶಿ ಸರಿತ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುರಳಿ ಮೋಹನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಆರ್.ನಾರಾಯಣಸ್ವಾಮಿ, ಪ್ರೌಡಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಕ್ಕಲರೆಡ್ಡಿ, ಸೇರಿದಂತೆ ವಿವಿಧ ಇಲಾಖೆಯ ನೌಕರರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!