Doddadasenahalli, Sidlaghatta : ತಾಲ್ಲೂಕಿನ ದೊಡ್ಡದಾಸೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಂಡಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ ಮಾತನಾಡಿ, ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ. ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.
ಶಾಲೆಯಲ್ಲಿನ ಹಸಿರು ಪರಿಸರ, ವಿದ್ಯಾರ್ಥಿಗಳಿಗೆ ಕಲಿಸುವ ಸಂಸ್ಕಾರ ಮತ್ತು ಗ್ರಾಮಸ್ಥರ ಸಹಭಾಗಿತ್ವದಿಂದ ಈ ರೀತಿಯ ಕಾರ್ಯಕ್ರಮಗಳು ನಡೆಯಲು ಸಾಧ್ಯ ಎಂದು ಹೇಳಿದರು.
ಶಾಲೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಹಾಗೂ ವರ್ಗಾವಣೆಯಾಗಿರುವ ಶಿಕ್ಷಕರಾದ ಅಶ್ವತ್ಥನಾರಾಯಣ್, ಎಚ್.ಎಂ.ಶ್ರೀನಿವಾಸ್, ಪಿ.ರಾಮಚಂದ್ರಪ್ಪ, ಕೆ.ಎಂ.ರಾಜಣ್ಣ, ಎಸ್.ರಘುನಾಥ್, ಎ.ವಿ.ಉಷಾ ಮತ್ತು ಎಸ್.ಎ.ಚಂದ್ರಶೇಖರ್ ಅವರನ್ನು ಹಳೆಯ ವಿದ್ಯಾರ್ಥಿಗಳು ಗೌರವಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ತ್ಯಾಗರಾಜ್, ಕ್ಷೇತ್ರ ಸಿಬ್ಬಂದಿ ಮಂಜುನಾಥ್, ಲಕ್ಷ್ಮೀನಾರಾಯಣ, ವೇಣುಮಾಧವಿ, ಇಸಿಒ ಭಾಸ್ಕರಗೌಡ, ಸಿ.ಆರ್.ಪಿ ಗಳಾದ ರೆಡ್ಡಪ್ಪ, ಪ್ರಭಾಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಎಲ್.ವಿ.ವೆಂಕಟರೆಡ್ಡಿ ಹಾಜರಿದ್ದರು.