Chintamani : ಚಿಂತಾಮಣಿ ತಾಲ್ಲೂಕಿನ ಕುರುಬೂರಿನ ನವೋದಯ ಎಜುಕೇಶನಲ್ ಟ್ರಸ್ಟ್‌ನ ಕಾಲೇಜಿನಲ್ಲಿ ಸೋಮವಾರ ಪದವಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ (THAAWARCHAND GEHLOT) ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮಾತಾನಾಡಿದ ರಾಜ್ಯಪಾಲರು “ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಪ್ರಾಚೀನ ಕಾಲದಿಂದಲೂ ‘ವಸುಧೈವ ಕುಟುಂಬಕಂ’ ತತ್ವ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ.ಭಾರತವು ಜ್ಞಾನ, ವಿಜ್ಞಾನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಗ್ರ ಸ್ಥಾನದಲ್ಲಿದೆ. ನಮ್ಮ ಪ್ರಾಚೀನ ಶಿಕ್ಷಣ ವ್ಯವಸ್ಥೆಯು ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿತ್ತು. ಅದಕ್ಕಾಗಿಯೇ ನಾವು ವಿಶ್ವ ನಾಯಕರೆಂದು ಪರಿಗಣಿಸಲ್ಪಟ್ಟಿದ್ದೇವೆ. ಭಾರತ ಯುವಕರ ದೇಶ. ಇಂದಿನ ಮಕ್ಕಳೇ ನಾಳಿನ ಭಾರತ ಮತ್ತು ಈ ದೇಶದ ಭವಿಷ್ಯದ ನಿರ್ಮಾತೃಗಳು. ಆದ್ದರಿಂದ ಅವರ ಶಿಕ್ಷಣ, ಕಲ್ಯಾಣ ಮತ್ತು ಅವರಲ್ಲಿ ನೈತಿಕ ಗುಣಗಳ ಬೆಳವಣಿಗೆಗೆ ವಿಶೇಷ ಗಮನ ನೀಡಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಸಿಇಒ ಪ್ರಕಾಶ್ ಜಿ. ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಎಲ್ ನಾಗೇಶ್ ಸೇರಿದಂತೆ ನವೋದಯ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಕೆ. ಸಿ. ಶಂಕರ್ ಗೌಡ, ಪ್ರಾಂಶುಪಾಲ ಪುಷ್ಪ ಮತಿತ್ತರರು ಉಪಸ್ಥಿತರಿದ್ದರು.