Tuesday, January 31, 2023
HomeGauribidanurಸರ್ ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಕಾರ್ಯಕ್ರಮ

ಸರ್ ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -
- Advertisement -
- Advertisement -

Gauribidanur: ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿನ ಜಿಟಿಟಿಸಿ ಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಸರ್ ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿದರು.

ಭಾರತ ಕಂಡ ಅಪ್ರತಿಮ ಎಂಜಿನಿಯರ್‌ ಹಾಗೂ ಕನ್ನಡ ನಾಡಿನ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಿದ ಸರ್ ಎಂ.ವಿಶ್ವೇಶ್ವರಯ್ಯನವರ ಸ್ಮರಣಾರ್ಥ ಎಂಜಿನಿಯರ್‌ ದಿನವನ್ನಾಗಿ ಆಚರಿಸಲಾಗುತ್ತದೆ. ನಾಡಿನಲ್ಲಿ ಕೈಗಾರಿಕೆಗಳ ಉದಯ ಹಾಗೂ ಸಾಕಷ್ಟು ಮಂದಿ ಯುವಕರಿಗೆ ಉದ್ಯೋಗದ ಅವಕಾಶಗಳನ್ನು ಕಲ್ಪಿಸಲು ವಿಶ್ವೇಶ್ವರಯ್ಯ ಕೊಡುಗೆ ಅಪಾರ. ಅವರು ಜನಿಸಿದ ಭೂಮಿಯಲ್ಲಿ ಜೀವಿಸುತ್ತಿರುವುದೇ ನಮ್ಮ ಅದೃಷ್ಟ, ಅವರ ಆದರ್ಶವನ್ನು ಮುಂದಿನ ಪೀಳಿಗೆಯು ಪಾಲಿಸಬೇಕು ಎಂದು ಅವರು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಎನ್.ಮುನಿರಾಜು, ಬಿಇಒ ಕೆ.ವಿ.ಶ್ರೀನಿವಾಸಮೂರ್ತಿ ,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಆರ್.ಮನುಜ, ಉಪಾಧ್ಯಕ್ಷರಾದ ಶ್ವೇತ ನಾಗಭೂಷಣ, ಪಿಡಿಒ ಚಂದ್ರಶೇಖರ ಕಾರಟಗಿ, ಕೈಗಾರಿಕಾ ಅಸೋಸಿಯೇಷನ್ ನ ಖಜಾಂಚಿ ಚಂದ್ರನ್, ಜಂಟಿ ಕಾರ್ಯದರ್ಶಿ ರಾಧಾಕೃಷ್ಣ, ಉಪಾಧ್ಯಕ್ಷರಾದ ಅನಿಲ್, ಜಿಟಿಟಿಸಿ ಪ್ರಾಂಶುಪಾಲರಾದ ಸಿ.ವೆಂಕಟೇಶ್, ಅಶ್ವತ್ಥನಾರಾಯಣ, ಮುಖಂಡರಾದ ಅಶ್ವತ್ಥಪ್ಪ, ಕಾರ್ತಿಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!