Chikkaballapur : ಗ್ರಾಮ ಪಂಚಾಯಿತಿ ನೌಕರರು (Grama Panchayat Employees) ಬುಧವಾರ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕನಿಷ್ಠ ವೇತನ ₹ 31 ಸಾವಿರ ನಿಗದಿ ಮಾಡಬೇಕು. ಕನಿಷ್ಠ ₹ 6 ಸಾವಿರ ಪಿಂಚಣಿ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು (Protest) .
ಐಡಿಪಿ ಸಾಲಪ್ಪ ವರದಿಯಂತೆ ಪಂಚಾಯಿತಿಗಳಲ್ಲಿ ಸ್ವಚ್ಛತಾಗಾರರನ್ನು ನೇಮಿಸಬೇಕು. ಸೇವಾ ಹಿರಿತನ ಪರಿಶೀಲಿಸಿ ವೇತನ ಹೆಚ್ಚಿಸಿ ತೀವ್ರ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ನೇಮಕ ರದ್ದುಗೊಳಿಸಬೇಕು. ಕನಿಷ್ಠ ವೇತನ ನಿಗದಿಗೊಳಿಸಬೇಕು ಎಂದು ನ್ಯಾಯಾಲಯವು ಆದೇಶಿಸಿದ್ದರು ಆದೇಶ ಜಾರಿಗೊಳಿಸುವಂತೆ ಕಾರ್ಮಿಕ ಸಚಿವರು, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸರ್ಕಾರ ಮೀನ ಮೇಷ ಎಣಿಸುತ್ತಿದೆ ಎಂದು ಪ್ರತಿಭನಕಾರರು ದೂರಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಂ.ಲಕ್ಷ್ಮಿದೇವಮ್ಮ, ಗ್ರಾಮ ಪಂಚಾಯಿತಿ ನೌಕರರ ಸಂಘದ ಕೆ.ಎನ್.ಪಾಪಣ್ಣ, ಶಂಕರಪ್ಪ, ಶ್ರೀನಿವಾಸ್, ರಾಮಕೃಷ್ಣ, ನರಸಿಂಹಮೂರ್ತಿ, ಮಂಜುನಾಥ್, ರಾಮಲಿಂಗಪ್ಪ, ಈಶ್ವರಪ್ಪ ಮತ್ತಿತರರು ಪಾಲ್ಗೊಂಡಿದ್ದರು.