Chintamani : ಚಿಂತಾಮಣಿ ನಗರದ ಹೊರವಲಯದ ಕೋಲಾರ ರಸ್ತೆಯಲ್ಲಿ ಬುಧವಾರ ಗ್ಯಾರಂಟಿ ಸಮಾವೇಶಕ್ಕೆ (Guarantee Samavesha) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3 ಲಕ್ಷ ಕುಟುಂಬಗಳು ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಪಡೆಯುತ್ತಿದ್ದು ರಾಜ್ಯದಲ್ಲಿ 1.20 ಕೋಟಿ ಕುಟುಂಬಗಳು ಸೌಲಭ್ಯಕ್ಕೆ ಒಳಪಟ್ಟಿವೆ. ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ ಜಾರಿ ಮಾಡಿದರೆ ಕರ್ನಾಟಕದ ಖಜಾನೆ ಖಾಲಿ ಆಗಿ ಆರ್ಥಿಕ ಸ್ಥಿತಿ ದಿವಾಳಿ ಆಗುತ್ತದೆ ಎಂದು ವಿರೋಧ ಪಕ್ಷವರು ಹೇಳಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಮಾಸಿಕ ಪ್ರತಿ ಕುಟುಂಬಕ್ಕೆ ನಾಲ್ಕರಿಂದ ಐದು ಸಾವಿರ ಕೊಡುತ್ತಿದ್ದೇವೆ. ಇದು ಕೆನಡಾದಲ್ಲಿ ಜಾರಿಯಲ್ಲಿದೆ. ಸಾಮಾಜಿಕ ಭದ್ರತೆ ಎಲ್ಲರಿಗೂ ದೊರೆಯಬೇಕು. ಆರ್ಥಿಕ ಮತ್ತು ಸಾಮಾಜಿಕವಾಗಿ ಮೇಲೆ ಬಂದಾಗ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ” ಎಂದು ಹೇಳಿದರು.
ಸಚಿವರಾದ ಎಚ್.ಸಿ.ಮಹದೇವಪ್ಪ, ಕೃಷ್ಣ ಬೈರೇಗೌಡ, ಬೈರತಿ ಸುರೇಶ್,ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್, ಬಿ.ಎನ್. ರವಿಕುಮಾರ್, ಕೆ.ಎಚ್. ಪುಟ್ಟಸ್ವಾಮಿಗೌಡ, ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್ ಹಾಗೂ ಅಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.