Chikkaballapur : ಚಿಕ್ಕಬಳ್ಳಾಪುರ ನಗರದ KSRTC ಬಸ್ ನಿಲ್ದಾಣದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳನ್ನು ಬಿಂಬಿಸುವ ಸಂಬಂಧ ವಾರ್ತಾ ಇಲಾಖೆ, ಕೆ.ಎಸ್.ಆರ್.ಟಿ.ಸಿ ಚಿಕ್ಕಬಳ್ಳಾಪುರ ವಿಭಾಗ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ವಸ್ತುಪ್ರದರ್ಶನ ಮಳಿಗೆಯನ್ನು (Guarantee Scheme Exhibition) ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ “ಐದು ಗ್ಯಾರಂಟಿ ಯೋಜನೆಗಳ ಈ ವಸ್ತುಪ್ರದರ್ಶನ ಮಳಿಗೆಯು ಮಾ.14 ರವರೆಗೆ ಮೂರು ದಿನಗಳ ಕಾಲ ಪ್ರದರ್ಶನಗೊಳ್ಳಲಿದ್ದು ಸಾರ್ವಜನಿಕರು, ಪ್ರಯಾಣಿಕರು ಹೆಚ್ಚಿನ ಮಟ್ಟದಲ್ಲಿ ಈ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ತಿಳಿದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಲ್ಲೂರಿ ಹಿಮವರ್ಧನ ನಾಯ್ಡು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.