Gudibande : ಗುಡಿಬಂಡೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ (Abolition of child labour) ಕುರಿತು ಸೋಮವಾರ ಕಾನೂನು ಅರಿವು ನೆರವು (Workshop) ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಜೆಎಂಎಫ್‌ಸಿ ನ್ಯಾಯಾಧೀಶ ಕೆ.ಎಂ.ಹರೀಶ್ ಮಾತನಾಡಿ “ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿದ್ದು ಮನೆಯ ಆರ್ಥಿಕ ಪರಿಸ್ಥಿತಿ ಸೇರಿದಂತೆ ಕೆಲವೊಂದು ಸಮಸ್ಯೆಗಳ ಕಾರಣದಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತಗೊಂಡು ಬಾಲ ಕಾರ್ಮಿಕರಾಗುತ್ತಾರೆ. ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಪ್ರತಿಯೊಬ್ಬರೂ ಸಹಕರಿಸಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕ ಸತೀಶ್ ಜಿಲ್ಲಾ ಬಾಲಕಾರ್ಮಿಕ ಪದ್ಧತಿ ನಿರ್ಮೂಲನ ಸಂಘದ ಯೋಜನಾ ನಿರ್ದೇಶಕ ರಮೇಶ್, ವಕೀಲ ಮಹೇಶ, ಚೇತನ್, ಅಭಿಷೇಕ್ ಉಪಸ್ಥಿತರಿದ್ದರು.