Gudibande : ಏಪ್ರಿಲ್ 7ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅಂಬೇಡ್ಕರ್ ಭವನ (Ambedkar Bhavan) ನಿರ್ಮಾಣಕ್ಕಾಗಿ ನಿವೇಶನ ನೀಡುವ ಭರವಸೆ ನೀಡಿದ್ದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿರವರ ಸೂಚನೆಯಂತೆ ಕಂದಾಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಿದ್ದರು. ಅಂಬೇಡ್ಕರ ಭವನ ನಿರ್ಮಾಣಕ್ಕೆ ಗುಡಿಬಂಡೆಯ ಅಮಾನಿಬೈರಸಾಗರ ಕೆರೆಯ ಬಳಿ 30 ಗುಂಟೆ ಜಮೀನು ಗುರುತಿಸಿ ಜಿಲ್ಲಾಧಿಕಾರಿಗಳು ಮುಂದಿನ ಕ್ರಮಕ್ಕಾಗಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗೆ ಜಮೀನು ಹಸ್ತಾಂತರ ಮಾಡಲು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ದಲಿತ ಮುಖಂಡ ಜಿ.ವಿ.ಗಂಗಪ್ಪ , ಪಟ್ಟಣದ ಸಮೀಪದಲ್ಲಿ ಅಂಬೇಡ್ಕರ್ ಭವನಕ್ಕಾಗಿ ಹಲವಾರು ವರ್ಷಗಳಿಂದ ಒತ್ತಾಯ ಮಾಡಲಾಗುತ್ತಿತ್ತು. ಶಾಸಕರು, ಅಧಿಕಾರಿಗಳ ಸಹಕಾರದಿಂದ ಅಂಬೇಡ್ಕರ್ ಭವನದ ನಿರ್ಮಾಣ ಸುಗಮವಾಗಿದೆ ಎಂದರು.