Gudibande : ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿ (Taluk Office) ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸಿಗ್ಬತ್ಉಲ್ಲಾ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಮನವಿ ಪತ್ರ ಸಲ್ಲಿಸಿದರು.
ಗಣರಾಜ್ಯೋತ್ಸವದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ (Dr. B.R. Ambedkar) ಭಾವಚಿತ್ರಕ್ಕೆ ಅವಮಾನ ಮಾಡುವ ಮೂಲಕ ಸಂವಿಧಾನಕ್ಕೆ ದ್ರೋಹ ಬಗೆದಿದ್ದಾರೆ ಎಂದು ಮುಖಂಡ ಈಶ್ವರಪ್ಪ ತಿಳಿಸಿದರು.
ಕಸಾಪ ತಾಲ್ಲೂಕು ಅಧ್ಯಕ್ಷ ಸುಬ್ಬರಾಯಪ್ಪ, ದಸಂಸ ಮುಖಂಡರಾದ ವೆಂಕಟರಮಣ, ಚಲಪತಿ, ಗಂಗಾಧರಪ್ಪ, ಆದಿನಾರಾಯಣಪ್ಪ, ನರಸಿಂಹಪ್ಪ. ಜೀವಿಕ ಸಂಘಟನೆಯ ನಾರಾಯಣಸ್ವಾಮಿ, ರಾಜು, ನಾರಾಯಣಸ್ವಾಮಿ, ಅಶ್ವತ್ಥಪ್ಪ, ನರಸಿಂಹಮೂರ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.