Gudibande : ಗುಡಿಬಂಡೆ ತಾಲ್ಲೂಕಿನ ಬಂದಾರಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ (Bandarlahalli Government School) ಬೆಂಗಳೂರಿನ Rainbow ಸಂಸ್ಥೆ ಹಾಗೂ ಚಿಕ್ಕಬಳ್ಳಾಪುರದ ಹಸಿರು ಸ್ವಯಂ ಸೇವಾ ಸಂಸ್ಥೆಯವರು ನಲಿಕಲಿ ಟೇಬಲ್ ಮತ್ತು ಕುರ್ಚಿ ಹಾಗೂ ನಾಲ್ಕು, ಐದನೇ ತರಗತಿಗೆ ಮಕ್ಕಳು ಕುಳಿತುಕೊಳ್ಳಲು ಡೆಸ್ಕ್ ಗಳನ್ನು ಕೊಡುಗೆಯಾಗಿ ನೀಡಿದ್ದರು.
ರೈನ್ ಬೋ ಸಂಸ್ಥೆ ಹಾಗೂ ಹಸಿರು ಸ್ವಯಂ ಸೇವಾ ಸಂಸ್ಥೆಯವರ ಕಾರ್ಯ ಶ್ಲಾಘನೀಯ, ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ವರ್ಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಬಿಸಿಯೂಟ, ಕ್ಷೀರ ಭಾಗ್ಯದಂತಹ ಮಹತ್ವದ ಯೋಜನೆ ಗಳನ್ನೂ ನೀಡಲಾಗುತ್ತಿದ್ದು ಖಾಸಗಿ ಶಾಲೆಗಳ ಹಾವಳಿ ಮಧ್ಯೆ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಆಕರ್ಷಿಸಲು ದಾನಿಗಳ ಸಹಕಾರ ಅತ್ಯಗತ್ಯ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಕೆ.ವಿ.ನಾರಾಯಣಸ್ವಾಮಿ, ದೈಹಿಕ ಶಿಕ್ಷಣ ಸಂಯೋಜಕ ಡಾ.ಪ್ರಕಾಶ್ ರೈನ್ ಬೋ ಸಂಸ್ಥೆಯ ಸುರೇಶ್ ಬಾಬು, ರಾಘವೇಂದ್ರ, ಹಸಿರು ಸ್ವಯಂ ಸೇವಾ ಸಂಸ್ಥೆಯ ಪ್ರದೀಪ್, ಶಿಕ್ಷಣ ಸಂಯೋಜಕ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಾಜಿ, ಪ್ರಧಾನ ಕಾರ್ಯದರ್ಶಿ ಶ್ರೀರಾಮಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಖಜಾಂಚಿ ಶ್ವೇತಾ, ಸುಮಿತ್ರ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur