Tuesday, March 28, 2023
HomeGudibandeಅಂತರ್ಜಲ ಚೇತನ ಕಾರ್ಯಕ್ರಮ

ಅಂತರ್ಜಲ ಚೇತನ ಕಾರ್ಯಕ್ರಮ

- Advertisement -
- Advertisement -
- Advertisement -
- Advertisement -

Gudibande : ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ (Beechaganahalli Grama Panchayat) ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ FES ಸಂಸ್ಥೆಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (MNREGS) ನಡೆದ ಅಂತರ್ಜಲ ಚೇತನ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರವೀಂದ್ರ “ಅಂತರ್ಜಲ ಚೇತನ ಕಾರ್ಯಕ್ರಮವು ಪರಿಣಾಮಕಾರಿಯಾಗಿ ಜಾರಿಯಾಗಲು ತಾಂತ್ರಿಕ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಜನರ ಸಹಭಾಗಿತ್ವ ಬಹು ಮುಖ್ಯ ಪಾತ್ರವಹಿಸುತ್ತದೆ. ದಿಣ್ಣೆಯಿಂದ ತಗ್ಗು ಪ್ರದೇಶದಲ್ಲಿ ಅಂತರ್ಜಲಮಟ್ಟ ವೃದ್ಧಿಸುವ ಸಲುವಾಗಿ ಈ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ” ಎಂದು ಹೇಳಿದರು.

ಎಫ್‌ಇಎಸ್ ಸಂಸ್ಥೆಯ ಜಿಲ್ಲಾ ಸಂಯೋಜಕ ಎಚ್.ಪಿ. ಪ್ರಸನ್ನಕುಮಾರ್, ಎಫ್‌ಇಎಸ್ ಸಂಸ್ಥೆಯ ತಾಂತ್ರಿಕ ಸಲಹೆಗಾರ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಂತ್ರಿಕ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!