Gudibande : ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ (BESCOM Load Shedding) ಮಾಡುತ್ತಿಲ್ಲ ಎಂದು ಆರೋಪಿಸಿ ಮಂಗಳವಾರ ಗುಡಿಬಂಡೆ ತಾಲೂಕಿನ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು ಗುಡಿಬಂಡೆ BESCom ಕಚೇರಿ ಬಳಿ ಪ್ರತಿಭಟನೆ (Farmer Protest) ನಡೆಸಿದರು. ಪಂಪ್‌ಸೆಟ್‌ಗಳಿಂದಲೇ ಕೃಷಿ ಚಟುವಟಿಕೆ ಯಲ್ಲಿ ತೊಡಗುವ ರೈತರ ಪಂಪ್‌ಸೆಟ್‌ಗಳಿಗೆ 7 ತಾಸು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಟ್ರಾನ್ಸ್‌ಫಾರ್ಮರ್ ಬಳಿ ಇರುವ ಗಿಡಗಂಟೆಗಳನ್ನು ತೆರವು ಮಾಡಿಸಬೇಕು. ಜೋತು ಬಿದ್ದ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು, ವಿದ್ಯುತ್ ತಂತಿಗಳು ಹಾದು ಹೋಗಿರುವ ಕಡೆ ಮರಗಳ ರೆಂಬೆಗಳನ್ನು ತೆಗೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಎನ್. ಸೋಮಶೇಖರ ಮಾತನಾಡಿ “ಗುಡಿಬಂಡೆ ತಾಲ್ಲೂಕಿನ ರೈತರಿಗೆ ಶಾಶ್ವತ ನೀರಾವರಿ ಯೋಜನೆಗಳು ಲಭ್ಯವಿಲ್ಲದ ಕಾರಣ ಕೃಷಿ ಚಟುವಟಿಕೆಗೆ ಕೊಳವೆಬಾವಿಗಳನ್ನೇ ನೆಚ್ಚಿಕೊಂಡಿದ್ದಾರೆ. ಸುಮಾರು 500 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಆಲೂಗಡ್ಡೆ, ಸೇವಂತಿಗೆ, ರೋಜಾ ಹೂವು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತದೆ. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ರೈತರಿಗೆ ತೊಂದರೆಯಾಗುತ್ತಿದೆ” ಎಂದು ತಿಳಿಸಿದರು.
ಈ ಸಂಬಂಧ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಶ್ವಾಸ್ ಅವರಿಗೆ ಮನವಿ ಪತ್ರ ನೀಡಲಾಯಿತು. ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖ ಮುಖಂಡರಾದ ರಾಮರೆಡ್ಡಿ, ಭೂಪಾಲ್ ರೆಡ್ಡಿ, ಬಲರಾಮಪ್ಪ, ವೆಂಕಟರೋಣಪ್ಪ ಚೌಡರೆಡ್ಡಿ, ಎ. ಶ್ರೀನಿವಾಸ, ಲಕ್ಷ್ಮೀನಾರಾಯಣಪ್ಪ, ಗಂಗಿರೆಡ್ಡಿ, ರಾಮಾಂಜಿನಪ್ಪ, ಗಂಗಾಧರಪ್ಪ ಮತ್ತಿತರರು ಭಾಗವಹಿಸಿದ್ದರು.