Gudibande : ಗುಡಿಬಂಡೆ ತಾಲ್ಲೂಕು ನ್ಯಾಯಾಲಯ ಆವರಣದಲ್ಲಿ (Court Complex) ಭಾನುವಾರ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ಪಟ್ಟಣ ಪಂಚಾಯಿತಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ (Swatchchata Abhiyan), ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಕೆ.ಎಂ.ಹರೀಶ್ ಮಾತನಾಡಿ “ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲರ ಕರ್ತವ್ಯ. ಸ್ವಚ್ಛತೆ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿನಿತ್ಯವೂ ಮನೆ, ಶಾಲಾ ಕಾಲೇಜು, ಕಚೇರಿಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎ.ರಾಮನಾಥ್ ರೆಡ್ಡಿ, ಪ.ಪಂ ಮುಖ್ಯಾಧಿಕಾರಿ ಶ್ರೀನಿವಾಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ರವೀಂದ್ರ, ಉಪನ್ಯಾಸಕ ಜಿ.ಸೋಮಶೇಖರ್, ವಕೀಲ ಸಂಘದ ಉಪಾಧ್ಯಕ್ಷ ನಂದೀಶ್ವರ ರೆಡ್ಡಿ, ವಕೀಲ ಬಾಬಾಜಾನ್, ನ್ಯಾಯಾಲಯ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.