Gudibande : ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಬುಧವಾರ ದಲಿತ ಸಂಘರ್ಷ ಸಮಿತಿ (DSS) ಮುಖಂಡರ ನೇತೃತ್ವದಲ್ಲಿ ನೂತನ ಕಚೇರಿ ಉದ್ಘಾಟನೆ ಮಾಡಲಾಯಿತು.
ಕಚೇರಿ ಉದ್ಘಾಟಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎನ್.ಮುನಿಸ್ವಾಮಿ ” ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವನ ನಡೆಸುವ ವ್ಯವಸ್ಥೆಗಾಗಿ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದರು. ಅರ್ಥಿಕವಾಗಿ ಸಬಲರಾದವರು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಚುನಾವಣೆಗಳಲ್ಲಿ ಗೆದ್ದು ಶಾಸಕ, ಸಂಸದರಾಗಿ ಆಯ್ಕೆ ಆಗುತ್ತಿದ್ದಾರೆ. ಸಂವಿಧಾನದ ಆಶಯವನ್ನು ಎತ್ತಿ ಹಿಡಿದು ಹಣದ ಆಮಿಷಕ್ಕೆ ಬಲಿಯಾಗದೆ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮುಂದಾಗಬೇಕಿದೆ” ಎಂದು ತಿಳಿಸಿದರು.
ಸಾಹಿತಿ ಜಿ.ಎಂ.ಶಿವಪ್ರಸಾದ್, ದಸಂಸ ರಾಜ್ಯ ಸಂಚಾಲಕ ವೆಂಕಟೇಶ್, ಜಿ.ಪಂ. ಮಾಜಿ ಸದಸ್ಯ ರಾಜಾಕಾಂತ್, ದಸಂಸ ಜಿಲ್ಲಾ ಸಮಿತಿಯ ಜಿ.ವಿ.ಗಂಗಪ್ಪ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.