Gudibande : ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಹೋಬಳಿ ಗೆಗ್ಗಿಲರಾಳ್ಳಹಳ್ಳಿ ಬಳಿಯ ಇಂದಿರಾಗಾಂಧಿ ವಸತಿ ಶಾಲೆ (Smt. Indira Gandhi Residential School) 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳಿಂದ ಅರ್ಜಿ (Application) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸಂಬರ್ 31, ಕೊನೆ ದಿನವಾಗಿದ್ದು 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ತಾಲ್ಲೂಕು ಕೇಂದ್ರದಲ್ಲಿ ಫೆ.18ರಂದು (ಭಾನುವಾರ) ಸ್ವರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಅರ್ಹ ವಿದ್ಯಾರ್ಥಿನಿಯರು ಅರ್ಜಿ ಜತೆಗೆ ಜಾತಿ ಆದಾಯ ಪ್ರಮಾಣ ಪತ್ರ, ಎರಡು ಭಾವಚಿತ್ರ ಹಾಗೂ ಶಾಲಾ ಮುಖ್ಯ ಶಿಕ್ಷಕರಿಂದ ದೃಢೀಕರಣದೊಂದಿಗೆ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9591511644 ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಎನ್.ಅಂಜನೇಯಲು ತಿಳಿಸಿದ್ದಾರೆ.