Home Gudibande ಗುಡಿಬಂಡೆ : ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ

ಗುಡಿಬಂಡೆ : ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ

0
Gudibande KDP Meeting S N Subbareddy

Gudibande : ಗುಡಿಬಂಡೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ (KDP Meeting) ನಡೆಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ (S N Subba Reddy) “1800 ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು 2 ಹಂತಗಳಲ್ಲಿ 75 ಎಕರೆ ಜಮೀನಿಗೆ ಮಂಜೂರಾತಿ ನೀಡಲಾಗಿದ್ದು, ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ನೀಡಲು 9 ವರ್ಷಗಳಿಂದ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಅಧಿಕಾರಿಗಳು ಕುಂಟುನೆಪ ಹೇಳಿಕೊಂಡು ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಾಲ್ಲೂಕಿನ ನಿವೇಶನ ರಹಿತರಿಗೆ ನಿವೇಶನ ಹಾಗೂ ಸಾರಿಗೆ ರಹಿತ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ವಿಫಲನಾದರೆ, ಮತ್ತೆ ರಾಜಕೀಯ ಜೀವನದಿಂದ ಹಿಂದೆ ಸರಿಯುತ್ತೇನೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ 15 ದಿನಗಳ ಒಳಗೆ ಹಕ್ಕುಪತ್ರ ವಿತರಿಸಬೇಕು. ಇಲ್ಲದಿದ್ದರೆ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಇಒ ರವೀಂದ್ರ ಅವರಿಗೆ ಎಚ್ಚರಿಕೆ ನೀಡಿದ ಶಾಸಕರು ರಸ್ತೆ ಅಗಲೀಕರಣದಿಂದ ಮನೆ ಕಳೆದುಕೊಂಡವರಿಗೆ ಈವರೆಗೆ ನಿವೇಶನ ಕಲ್ಪಿಸದ ಬಗ್ಗೆಯೂ ಅಧಿಕಾರಿಗಳನ್ನು ಪ್ರಶ್ನಿಸಿದರು. ನಂತರ ಸಭೆಯಲ್ಲಿ ಸಾಮಾಜಿಕ, ವಲಯ ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಪಶು ಇಲಾಖೆ, ಬೆಸ್ಕಾಂ, ಲೋಕೋಪಯೋಗಿ ಇಲಾಖೆ ಸಣ್ಣ ನೀರಾವರಿ ಇಲಾಖೆ, ರೇಷ್ಮೆ ಇಲಾಖೆ, ವಿಷಯಗಳು ಚರ್ಚಿಸಲಾಯಿತ್ತು.

ಸಭೆಯಲ್ಲಿ ತಹಶೀಲ್ದಾರ್ ಸಿಗ್ಬತುಲ್ಲಾ, EO ರವೀಂದ್ರ, BEO ಮುನೇಗೌಡ, ಎಡಿಎ ಅಮರನಾರಾಯಣರೆಡ್ಡಿ, ADH. ಕೃಷ್ಣಮೂರ್ತಿ, AEE ರಘುನಾಥಮೂರ್ತಿ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ನವೀನ, ಮುಖ್ಯಾಧಿಕಾರಿ ರಾಜಶೇಖರ್, CDPO ರಪೀಕ್, ಸಮಾಜ ಕಲ್ಯಾಣ ಇಲಾಖೆ ಎಡಿಎ ಕೆ.ರವಿ, BCM ಅಧಿಕಾರಿ ರಾಮಯ್ಯ, RFO ಚಂದ್ರಶೇಖರರೆಡ್ಡಿ, KDP ನಾಮಿನಿ ಸದಸ್ಯರಾದ ಹನುಮಂತರೆಡ್ಡಿ, ನರಸಿಂಹಮೂರ್ತಿ, ಮಂಜುನಾಥ, ಜಯಮ್ಮ, ಪಿಡಿಒ ನಾಗರಾಜ್, ರಾಮಾಂಜಿ, ಶ್ರೀನಿವಾಸ್, ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version