Gudibande : ಗುಡಿಬಂಡೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ (Legal awareness) ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಕೆ.ಎಂ.ಹರೀಶ್ , ಮಾದಕ ವಸ್ತುಗಳ ಸೇವನೆ ಮನುಷ್ಯನ ಮಾನಸಿಕ, ದೈಹಿಕ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗಲಿದ್ದು ಯುವ ಸಮುದಾಯ ಹಾದಿ ತಪ್ಪದಂತೆ ಜಾಗೃತಿ ಮೂಡಿಸುವ ಸಲುವಾಗಿ ಕಾನೂನು ಸೇವಾ ಪ್ರಾಧಿಕಾರ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿದೆ” ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಜಿ.ವಿ.ವಿಶ್ವನಾಥ, ಪ್ರಾಂಶುಪಾಲ ಎ.ರವೀಂದ್ರ, ವಕೀಲರ ಸಂಘದ ಅಧ್ಯಕ್ಷ ಎ.ರಾಮನಾಥರೆಡ್ಡಿ, ನಾಗರಾಜ್, ನಂದೀಶ್ವರ ರೆಡ್ಡಿ, ಎಚ್.ನರಸಿಂಹಯ್ಯ, ಬಾಬಾಜಾನ್, ಅಮರೇಶ್, ಆರ್.ಜಿ ಸೋಮಶೇಖರ್, ಬಿ.ಜೆ ರಾಮಣ್ಣ, ಎಸ್.ಜೆ.ನಾಗರತ್ನ, ಮೋಹನ್ ಕುಮಾರ್, ರಾಮಾಂಜಿನಪ್ಪ ಮತ್ತಿತರರು ಉಪಸ್ಥಿತರಿದ್ದರು .