Gudibande : ಗುಡಿಬಂಡೆ ತಾಲ್ಲೂಕು ಪಂಚಾಯಿತಿ, ಸ್ವೀಪ್ ಸಮಿತಿ, ಆರೋಗ್ಯ ಇಲಾಖೆ ವತಿಯಿಂದ ಗುಡಿಬಂಡೆ ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿ ಲೋಕಸಭಾ ಚುನಾವಣೆಯ (Lokasabha Election) ಅಂಗವಾಗಿ ಮತದಾನ ಜಾಗೃತಿ (Voting Awareness) ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಆರೋಗ್ಯಧಿಕಾರಿ ಡಾ.ನರಸಿಂಹಮೂರ್ತಿ ಮಾತನಾಡಿ”ಅರ್ಹರು ತಪ್ಪದೇ ಮತದಾನ ಮಾಡಬೇಕು. ಸಮರ್ಥ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಸುಭದ್ರ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು” ತಿಳಿಸಿದರು.
ತಾ.ಪಂ ಇಒ ಹೇಮಾವತಿ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ರಂಗೋಲಿ ಬಿಡಿಸುವ ಮೂಲಕ ಮತದಾನದ ಮಹತ್ವ ಸಾರಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಆಶಾ ಕಾರ್ಯಕರ್ತರು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.