Gudibande : ಗುಡಿಬಂಡೆ ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (PLD Bank President Election) ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವೈ.ಎ.ಅಶ್ವತ್ಥರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸರಸ್ವತಮ್ಮ ಆಯ್ಕೆಯಾದರು.
ಒಟ್ಟು 14 ಸದಸ್ಯರಿದ್ದ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ವೈ.ಎ. ಅಶ್ವತ್ಥರೆಡ್ಡಿ ಹಾಗೂ ಲಕ್ಷ್ಮೀನಾರಾಯಣ, ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶಪ್ಪ ಹಾಗೂ ಸರಸ್ವತಮ್ಮ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ವೈ.ಎ. ಅಶ್ವತ್ಥರೆಡ್ಡಿ ಎಂಟು ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೇ, ಸರಸ್ಪತಮ್ಮ 9 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಚುನಾವಣೆಯ ಮೂಲಕ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರೇಮ್ ಕುಮಾರ್ ತಿಳಿಸಿದರು.
ಬಿಜೆಪಿ ಮುಖಂಡ ಚೆನ್ನಕೃಷ್ಣಾರೆಡ್ಡಿ, ತಟ್ಟಹಳ್ಳಿ ಮದ್ದಿರೆಡ್ಡಿ, ಚಂದ್ರಶೇಖರ್, ಚೆಂಡೂರು ರಾಮಾಂಜಿ, ಬೈರಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾದ ವೆಂಕಟೇಶಪ್ಪ, ಸುನಿತಾ, ಆನಂದ್, ಚಿಕ್ಕಕುರುಬರಹಳ್ಳಿ ವಿಎಸ್‌ಎನ್‌ಎನ್ ಅಧ್ಯಕ್ಷ ಪಾವಜೇನಹಳ್ಳಿ ನಾಗರಾಜರೆಡ್ಡಿ, ಮುರಳಿ ಉಪಸ್ಥಿತರಿದ್ದರು.