Gudibande : ಗಸ್ತು ವಾಹನ (Patroling Vehicle) ಹಾಗೂ ತುರ್ತು ಸಹಾಯವಾಣಿ ಸಂಖ್ಯೆ 112 ಕುರಿತು ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮದ ಪಿಎಂಶ್ರೀ ಶಾಲೆಯಲ್ಲಿ ಶುಕ್ರವಾರ ಪೆರೇಸಂದ್ರ ಪೊಲೀಸ್ ಠಾಣೆ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಹಾಗೂ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮ (Awareness Program) ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಹೆದ್ದಾರಿ ಗಸ್ತು ವಾಹನದ ಪೊಲೀಸ್ ಸಿಬ್ಬಂದಿ ಗಂಗಪ್ಪ “ಮೇಲಧಿಕಾರಿಗಳ ಸೂಚನೆಯಂತೆ ತುರ್ತು ಸಹಾಯವಾಣಿ ಹಾಗೂ ಗಸ್ತು ವಾಹನದ ಬಗ್ಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ. ವಾಹನದಲ್ಲಿ ಚಾಲಕ ಸೇರಿ ಇಬ್ಬರು ಪೊಲೀಸ್ ಸಿಬ್ಬಂದಿ ಇರಲಿದ್ದು, ಎಲ್ಲ ಕರೆಗಳನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸುವರು. ಅಪಘಾತ, ಕಳ್ಳತನ, ಬೆಂಕಿ ಅವಘಡಗಳಂತ ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮಕೈಗೊಳ್ಳುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಬಹುದು” ಎಂದು ತಿಳಿಸಿದರು
ಮುಖ್ಯಶಿಕ್ಷಕ ನಾಗಲಿಂಗಪ್ಪ, ಸಹ ಶಿಕ್ಷಕರು, ಪೋಷಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.