Gudibande : ಗುಡಿಬಂಡೆಯ ಬಾಲಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸಿದ್ದಪ್ಪ “ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ ಎಂಬ ಆಶಯದಲ್ಲಿ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ” ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ TPO ಮುರಳಿ, ECO ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮಪ್ಪ, ರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.