Gudibande : ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ (Republic Day) ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಗೌರವ ವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರುವವರು ಗಣತಂತ್ರ ವ್ಯವಸ್ಥೆಯನ್ನೂ ಗೌರವಿಸಬೇಕಿದೆ, ಸರ್ಕಾರಿ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದೆ. ದೇಶಕ್ಕಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಆಚರಿಸುವ ರಾಷ್ಟ್ರೀಯ ಹಬ್ಬಗಳನ್ನು ಧಾರ್ಮಿಕ ಹಬ್ಬಗಳಂತೆ ಆಚರಣೆ ಮಾಡಿದಾಗ ಮಾತ್ರ ಹುತ್ಮಾತರಿಗೆ ಗೌರವ ನೀಡಿದಂತಾಗುತ್ತದೆ” ಎಂದು ಹೇಳಿದರು.
ತಹಶೀಲ್ದಾರ್ ಸಿಗ್ಬತ್ ಉಲ್ಲಾ, ತಾ.ಪಂ. ಇ.ಒ ರವೀಂದ್ರ, ಕೃಷಿ ಇಲಾಖೆಯ ಎಡಿಎ ಅಮರನಾರಾಯಣರೆಡ್ಡಿ, ಶಂಕರಯ್ಯ, ತೋಟಗಾರಿಕೆ ಇಲಾಖೆಯ ಎಡಿಎ ದಿವಾಕರ, ರೇಷ್ಮೆ ಅಧಿಕಾರಿ ಮುನಿಶ್ವಾಮಿ, ಪ.ಪಂ. ಅಧ್ಯಕ್ಷೆ ಬಷೀರ್ ರಿಜ್ವಾನ, ಮುಖ್ಯಾಧಿಕಾರಿ ರಾಜಶೇಖರ್, ಸರ್ಕಾರಿ ನೌಕರರ ಸಂಘದ ಕೆ.ವಿ. ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ಬರಾಯಪ್ಪ, ಸ.ನ. ನಾಗೇಂದ್ರ, ಟಿಪಿಓ ಪ್ರಕಾಶ್, ಇಸಿಒ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.