Gudibande : ಚಿಕ್ಕಬಳ್ಳಾಪುರ ಕೆನರಾ ಬ್ಯಾಂಕ್ (Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಉದ್ಯೋಗ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ (Self Employed Training Workshop) ಏರ್ಪಡಿಸಲಾಗಿತ್ತು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ತರಬೇತಿ ಕೇಂದ್ರದ ಉಪನ್ಯಾಸಕ ಶಶಿಧರ್ “ಹೆಣ್ಣುಮಕ್ಕಳು ವಿಶೇಷವಾಗಿ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡುವ ಮೂಲಕ ತಮ್ಮ ಬದುಕು ಕಟ್ಟಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಬಹುತೇಕ ವಿದ್ಯಾರ್ಥಿಗಳು ಪದವಿ ಶಿಕ್ಷಣ ಅರ್ಧದಲ್ಲಿಯೇ ಮೊಟಕುಗಳಿಸುತ್ತಿರುವುದು ಕಳವಳಕಾರಿಯಾಗಿದ್ದು ಶೈಕ್ಷಣಿಕವಾಗಿ ಕನಿಷ್ಠ ಒಂದು ಪದವಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಚಿಕ್ಕಬಳ್ಳಾಪುರದ ಕೆನರಾ ಬ್ಯಾಂಕ್ ತರಬೇತಿ ಕೇಂದ್ರದ ಉಪನ್ಯಾಸಕರಾದ ಮಧುಪ್ರಿಯ, ಕಾಲೇಜಿನ ಪ್ರಾಧ್ಯಾಪಕರಾದ ಬಿ.ಎನ್.ಪ್ರಭಾಕರ್, ಕೆ.ಎಂ.ನಯಾಜ್ ಅಹ್ಮದ್, ವಿ.ಕೃಷ್ಣಪ್ಪ, ಸುಮಲತಾ ಮತ್ತಿತರರು ಉಪಸ್ಥಿತರಿದ್ದರು.