ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

- Advertisement -
- Advertisement -

Gudibande : ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು (Taluk Level Sports) ಗುಡಿಬಂಡೆ ಪಟ್ಟಣದ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ಆಯೋಜಿಸಲಾಗಿತು.

ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ. ಶಾಲಾ ಹಂತದಲ್ಲಿ ಮಕ್ಕಳಲ್ಲಿ ಇರುವ ವಿಶೇಷ ಪ್ರತಿಭೆ ಹಾಗೂ ಕ್ರೀಡಾ ಪ್ರತಿಭೆ ಗುರುತಿಸಿ ಆಯಾ ಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಬೆಳವಣಿಗೆಗೆ ಪ್ರೋತ್ಸಾಹ ನೀಡಲಿದ್ದಾರೆ ಎಂದು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮುನೇಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಹನುಮಂತ ರೆಡ್ಡಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ಪ್ರೌಢಶಾಲಾ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮಿ ನರಸಿಂಹ ಗೌಡ, ತಿರುಮಣಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ್, ಪಟ್ಟಣ ಪಂಚಾಯಿತಿ ಸದಸ್ಯ ವೀಣಾ ನಿತಿನ್, ಕೆಪಿಎಸ್ ಶಾಲೆ ಪ್ರಾಂಶುಪಾಲ ರವೀಂದ್ರ, ಇಸಿಒ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶ್ರೀರಾಮರೆಡ್ಡಿ, ಟಿಪಿಒ ಮುರಳಿ, ದೈಹಿಕ ಶಿಕ್ಷಕ ಮನೋಹರ್, ಮುಖ್ಯ ಶಿಕ್ಷಕಿ ಪರಿಮಳ, ಪಟ್ಟಣ ಪಂಚಾಯತಿ ಅಧ್ಯಕ್ಷ, ಸದಸ್ಯರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!