Home News Gudibande ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

0
Gudibande World Day Against Child Labour

Gudibande : ಗುಡಿಬಂಡೆ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ಕಾರ್ಮಿಕ ಇಲಾಖೆ ವತಿಯಿಂದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ (World Day Against Child Labour), ಕರ್ನಾಟಕ ಲೋಕಾಯುಕ್ತ ಕಾಯ್ದೆ ಹಾಗೂ ಲಂಚ ನಿಷೇಧ ಕಾಯ್ದೆ ಪ್ರಯುಕ್ತ ನ್ಯಾಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ನ್ಯಾಯಾಧೀಶ ಕೆ.ಎಂ.ಹರೀಶ್ “ಪ್ರಜಾಪ್ರಭುತ್ವ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯವಿವಾಹ ಪದ್ಧತಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಅಧಿಕಾರಿಗಳೊಂದಿಗೆ ಕೈ ಜೋಡಿಸಬೇಕು.ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯ, ಸೇವೆಗಳು ವಿಳಂಬವಾದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು” ಎಂದರು.

ವಕೀಲರ ಸಂಘದ ಅಧ್ಯಕ್ಷ ರಾಮನಾಥರೆಡ್ಡಿ, ಉಪಾಧ್ಯಕ್ಷ ನಂದೀಶರೆಡ್ಡಿ, ಕಾರ್ಮಿಕ ನಿರೀಕ್ಷಕ ಟಿ.ಬಿ ಸತೀಶ್, ವಕೀಲ ಬಾಬಾ ಜಾನ್, ಅಮರೇಶ, ಅಭಿಷೇಕ್ ಮತ್ತಿತ್ತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version