Chintamani : ಚಿಂತಾಮಣಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಆಲಂಬಗಿರಿ (Alambagiri) ಗ್ರಾಮದ ಗುರುಮೂರ್ತೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು (Gurumurteshwara Swamy Brahma Rathotsava) ಬುಧವಾರದಂದು ಶ್ರದ್ಧಾ ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ನಡೆಯಿತು. ಗುರುಮೂರ್ತೇಶ್ವರಸ್ವಾಮಿಯ ಉತ್ಸವ ಮೂರ್ತಿಗೆ ಅಲಂಕರಿಸಿ ಶಾಸ್ತ್ರೋಕ್ತವಾಗಿ ರಥದಲ್ಲಿ ಪ್ರತಿಷ್ಠಾಪಿಸಿ ಮಧ್ಯಾಹ್ನ 1-30 ಗಂಟೆಗೆ ದೇವಾಲಯದ ಟ್ರಸ್ಟಿಗಳು ಮತ್ತು ಗ್ರಾಮದ ಮುಖಂಡರು ರಥಕ್ಕೆ ಪೂಜೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಿವನಾಮ ಸ್ಮರಣೆ ಮಾಡುತ್ತಾ ಭಕ್ತರು ರಥ ಬೀದಿಯಲ್ಲಿ ತೇರನ್ನು ಎಳೆದರು. ಮುಂಜಾನೆಯಿಂದಲೇ ಸುತ್ತಮುತ್ತಲ ಊರುಗಳಿಂದ ಆಗಮಿಸಿದ್ದ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಸರತಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸುತ್ತಿದ್ದರು. ಸಂಜೆ ಧೂಳೋತ್ಸವ ಹಾಗೂ ರಾತ್ರಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರವೇರಿದವು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur