29.8 C
Bengaluru
Wednesday, February 25, 2026

ದೇಶದ ಅಭಿವೃದ್ಧಿಗಾಗಿ BJP JDS ಮೈತ್ರಿ : ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

Chikkaballapur : ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ (H D Kumarswamy) ಸೋಮವಾರ BJP – JDS ಮೈತ್ರಿಕೂಟದ ಅಭ್ಯರ್ಥಿ ಡಾ.ಕೆ.ಸುಧಾಕರ್ (K Sudhakar) ಪರ ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರದಲ್ಲಿ ಪ್ರಚಾರ (Campaign) ನಡೆಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ “2014ರ ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲಿಂದ ಸ್ಪರ್ಧಿಸಿದ್ದಾಗ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 28 ಸಾವಿರ ಮತಗಳ ಲೀಡ್ ದೊರೆತಿತ್ತು. ಈ ಬಾರಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಅವರಿಗೆ 50ರಿಂದ 60 ಸಾವಿರ ಮತಗಳ ಲೀಡ್ ಕೊಡಬೇಕು. ದೇಶದ ಭದ್ರತೆ, ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲು ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಯಾವುದೇ ಸ್ವಾರ್ಥಕ್ಕಾಗಿ ಅಲ್ಲ. ದೇಶದ ಅಭಿವೃದ್ಧಿಗಾಗಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಎನ್.ಮುನಿಯಪ್ಪ, ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಕೇಶವರೆಡ್ಡಿ, ಪ್ರಭಾ ನಾರಾಯಣಗೌಡ, ಕೆ.ವಿ.ನಾಗರಾಜ್ ಮತ್ತಿತರರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!