Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗಿರಿಧಾಮದಲ್ಲಿ (Nandi Hills) ಪ್ರವಾಸೋದ್ಯಮ ಇಲಾಖೆಯಿಂದ ₹95 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ 200 ಆಸನಗಳ ಸಾಮರ್ಥ್ಯದ ಸಮ್ಮೇಳನ ಸಭಾಂಗಣವನ್ನು (Meeting hall) ಶುಕ್ರವಾರ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ (H. K. Patil) ಉದ್ಘಾಟಿಸಿದರು (inauguration).
ಈ ವೇಳೆ ಮಾತನಾಡಿದ ಸಚಿವರು “ನಂದಿಬೆಟ್ಟದ ಸೌಂದರ್ಯ ರಮಣೀಯವಾಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ನಂದಿಗಿರಿಧಾಮದಲ್ಲಿನ ಮಯೂರ ಹೋಟೆಲ್‌ನಲ್ಲಿ ಊಟದ ದರ ಹೆಚ್ಚಿದೆ ಎನ್ನುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. 15 ದಿನಗಳ ಒಳಗೆ ನಂದಿಬೆಟ್ಟದ ಪ್ರವೇಶಿಸುವ ಹಾದಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಈಗಾಗಲೇ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ವ್ಯವಸ್ಥಾಪಕರು ಜಾಗ ಸಹ ನೋಡಿದ್ದು ಜಿಲ್ಲಾಧಿಕಾರಿ ಅವರ ಜೊತೆ ಮಾತನಾಡಿದ್ದಾರೆ. ಕೆಲವು ಮಹತ್ವದ ಸಭೆಗಳನ್ನು ನಡೆಸಲು ಇದು ಉತ್ತಮ ಸ್ಥಳವಾಗಿದೆ” ಎಂದರು.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ತೋಟಗಾರಿಕೆ ಇಲಾಖೆಯ ವಿಶೇಷ ಅಧಿಕಾರಿ ಮಂಜುನಾಥ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಯಶ್ವಂತ್ ಕುಮಾರ್, ಕೆ.ಎಸ್.ಟಿ.ಡಿ. ನಿಗಮದ ಸಹಾಯಕ ವ್ಯವಸ್ಥಾಪಕ ದೇವರಾಜು, ವ್ಯವಸ್ಥಾಪಕ ಮನೋಜ್ ಹಾಗೂ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.