Chikkaballapur : ಸ್ವಾತಂತ್ರ್ಯ ಅಮೃತ ಮಹೋತ್ಸವದ (Azadi ka Amrit Mahotsav) ಅಂಗವಾಗಿ ಚಿಕ್ಕಬಳ್ಳಾಪುರ ನಗರದ ನಗರಸಭೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್‌ರೆಡ್ಡಿ ಬಾಬು “ಸ್ವಾತಂತ್ರ್ಯ ಅಮೃತೋತ್ಸವ ಅಂಗವಾಗಿ August 12 ರಂದು ಬೆಳಿಗ್ಗೆ 7 ಗಂಟೆಗೆ ನಗರದ ಜೈ ಭೀಮ್ (Jai Bheem) ಹಾಸ್ಟೆಲ್ ಬಳಿಯಿಂದ 1 ಕಿ.ಮೀ ಉದ್ದದ ತ್ರಿವರ್ಣ ಧ್ವಜದೊಂದಿಗೆ (Indian National Flag) ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದ್ದು, ಸಚಿವ ಡಾ.ಕೆ.ಸುಧಾಕರ್ (K Sudhakar) ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ನಗರಸಭೆಯಿಂದ ನಗರದ ಪ್ರತಿ ಮನೆಗೆ ತ್ರಿವರ್ಣ ಧ್ವಜವನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು August 13 ರಿಂದ August15 ರವರೆಗೆ ನಾಗರೀಕರು ತಮ್ಮ ಮನೆಯ ಮೇಲೆ ಧ್ವಜ ಹಾರಿಸಿ (Har Ghar Tiranga) ಐಕ್ಯತೆ ಪ್ರದರ್ಶಿಸಬೇಕು. ಈ ಮಹೋತ್ಸವದ ಯಶಸ್ಸಿಗೆ ನಗರಸಭೆ ಸದಸ್ಯರು, ಅಧಿಕಾರಿಗಳು ಕೈಜೋಡಿಸಬೇಕು” ಎಂದು ಮನವಿ ಮಾಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.