Gauribidanur : ಗೌರಿಬಿದನೂರು ತಾಲ್ಲೂಕಿನ ಹುದುಗೂರು (Huduguru) ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ರೈತ ಮಿತ್ರ ಬಳಗ ವತಿಯಿಂದ ಭಾನುವಾರ ಎತ್ತಿನ ಗಾಡಿ ಓಟದ ಸ್ಪರ್ಧೆ (Bullock cart Race) ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ “ಪ್ರತಿ ವರ್ಷ ರೈತ ಮಿತ್ರ ಬಳಗದಿಂದ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಯುತ್ತಿದೆ, ಇದಕ್ಕೆ ನನ್ನ ಸಂಪೂರ್ಣ ಬೆಂಬಲ ನೀಡಲಾಗುವುದು. ಪ್ರತಿಯೊಂದಕ್ಕೂ ಯಂತ್ರೋಪಕರಣಗಳನ್ನು ಬಳಸಿಕೊಂಡು ವ್ಯವಸಾಯ ಮಾಡುತ್ತಿರುವುದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ದನಕರುಗಳ ಸಂಖ್ಯೆ ದಿನೇ ದಿನೇ ಕಡಿಮೆ ಆಗುತ್ತಿವೆ.ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಸಾಲದ ಹೊರೆಗೆ ಸಿಲುಕಿದ್ದಾರೆ. ತಾಲ್ಲೂಕಿನಲ್ಲಿ ಈ ಬಾರಿ ಮಳೆ ಇಲ್ಲದೇ ಬರಗಾಲ ಘೋಷಣೆ ಆಗಿದೆ. ಆದಷ್ಟು ಬೇಗ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು” ಎಂದರು.
ಸ್ಪರ್ಧೆಯಲ್ಲಿ ವಿಜೇತರಾದ ರೈತರಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.